ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ ಎಂದಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನೂ ಹೇಳಲ್ಲ, ನನ್ನ ಬಳಿ ಹೇಳಲು ಏನೂ ಇಲ್ಲ ಎಂದು ತಿಳಿಸಿದ್ದಾರೆ.
ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈಗ ನಡೆದ ವಿದ್ಯಾಮನಗಳ ಬಗ್ಗೆ ಹೇಳಲು ನನ್ನ ಬಳಿ ಏನೂ ಇಲ್ಲ. ಯಾವ ವಿಚಾರದಲ್ಲಿಯೂ ಹೇಳಲು ಏನೂ ಇಲ್ಲ ಎಂದು ಹೇಳಿದರು.
