ಬೆಂಗಳೂರು: ಬೆಂಗಳೂರಿನಲ್ಲಿ 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ಅವರನ್ನು ಅಮಾನತು ಮಾಡಲಾಗಿದೆ.
ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿನ್ನೆಲೆ ಅಮಾನತು ಮಾಡಲಾಗಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು, ಬೆಂಗಳೂರಿನ ಎಲ್ಲಾ ಪೊಲೀಸ್ ಠಾಣೆಯ ಪಿಎಸ್ಐ, ಎಎಸ್ಐ, ಹೆಡ್ ಕಾನ್ಸ್ಟೇಬಲ್, ಕಾನ್ಸ್ಟೇಬಲ್ ಗಳನ್ನು ಮಾನಿಟರಿಂಗ್ ಮಾಡುವಂತೆ ತಿಳಿಸಿದ್ದಾರೆ. ಸಭೆ ನಡೆಸಿ ರಿಪೋರ್ಟ್ ನೀಡುವಂತೆ ಆಯಾ ವಿಭಾಗದ ಎಸಿಪಿ, ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ.
