BREAKING: ಅಮಿತ್ ಶಾ ಭೇಟಿಯಾಗಿ ರಾಜ್ಯ ರಾಜಕಾರಣದ ಮಾಹಿತಿ ನೀಡಿದ ವಿಜಯೇಂದ್ರ

ನವದೆಹಲಿ: ದೆಹಲಿಯಲ್ಲಿ ಇಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗೌರವಪೂರ್ವಕವಾಗಿ ಅಭಿನಂದಿಸಿದ್ದಾರೆ.

ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, NDA ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಅಮಿತ್ ಶಾ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ.

ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು. ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದು ವಿಜಯೇಂದ್ರ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read