HomeLatest Newsಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದ ಪೊಲೀಸರು ಸೇವೆಯಿಂದ ವಜಾ: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದ ಪೊಲೀಸರು ಸೇವೆಯಿಂದ ವಜಾ: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ಅಪರಾಧ ಚಟುವಟಿಕೆಗಳಲ್ಲಿ ಪೊಲೀಸರು ಭಾಗಿಯಾಗುವುದು ಕಂಡು ಬಂದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಅವರನ್ನು ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಎಚ್ಚರಿಕೆ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಕೆಲವು ಸೂಚನೆ ನೀಡಲಾಗಿದೆ. 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸರು ಏಳು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಕೆಲವರನ್ನು ಬಂಧಿಸಬೇಕಿದೆ ಎಂದರು.

ಪ್ರಕರಣದ ಜವಾಬ್ದಾರಿ ವಹಿಸಿಕೊಂಡ ಪೊಲೀಸ್ ಆಯುಕ್ತರು, ಡಿಸಿಪಿಗಳು ಹಾಗೂ ಇನ್ನೂರಕ್ಕೂ ಹೆಚ್ಚು ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುತ್ತೇನೆ. ದರೋಡೆ ಪ್ರಕರಣ ಪೋಲಿಸ್ ಇಲಾಖೆಗೆ ಸವಾಲಾಗಿತ್ತು. ತಾಂತ್ರಿಕವಾಗಿ ಬಹಳ ಎಚ್ಚರಿಕೆಯಿಂದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸ ಮಾಡಿ ಪ್ರಕರಣವನ್ನು ಭೇದಿಸಿದ್ದಾರೆ. ಇಲಾಖೆಯಲ್ಲಿ ಇನ್ನೂ ಮುಂದೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಈ ರೀತಿಯ ಕೃತ್ಯದಲ್ಲಿ ಯಾರಾದರೂ ಭಾಗಿಯಾಗುವುದು ಕಂಡು ಬಂದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸೇವೆಯಿಂದ ವಜಾಗೊಳಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular