ಉಡುಪಿ: ನ. 28 ರಂದು ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಎಸ್.ಪಿ.ಜಿ. ತಂಡ ಪ್ರಧಾನಿ ಭಾಗಿಯಾಗಲಿರುವ ಕಾರ್ಯಕ್ರಮ ಸ್ಥಳಗಳ ಪರಿಶೀಲನೆ ನಡೆಸಲಿದೆ.
ನ. 28ರಂದು ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ಹೊರಡಲಿರುವ ಪ್ರಧಾನಿ ಮೋದಿ ದೆಹಲಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಂಗಳೂರಿನಿಂದ ಉಡುಪಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ. ಅಂದು ಬೆಳಗ್ಗೆ 11:45 ರ ಸುಮಾರಿಗೆ ಉಡುಪಿಗೆ ಆಗಮಿಸಲಿರುವ ಅವರು 12 ಗಂಟೆಗೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.
ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದು, ಸುವರ್ಣ ತೀರ್ಥ ಮಂಟಪ ಲೋಕಾರ್ಪಣೆ ಮಾಡಲಿದ್ದಾರೆ. ಕನಕನ ಕಿಂಡಿಗೆ ಸ್ವರ್ಣ ಕವಚ ಲೋಕಾರ್ಪಣೆ ಮಾಡಲಿರುವ ಮೋದಿ ಮಧ್ಯಾಹ್ನ 12.15 ರಿಂದ 1.15ರವರೆಗೆ ಲಕ್ಷ ಕಂಠ ಗೀತ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1:45ಕ್ಕೆ ಉಡುಪಿಯಿಂದ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
