ಬೀದರ್: ಸಾಲಬಾಧೆಯಿಂದ ವೃದ್ಧ ರೈತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ಬಶಿರಾಪೂರ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಭೀಮಣ್ಣ(92) ಆತ್ಮಹತ್ಯೆ ಮಾಡಿಕೊಂಡ ರೈತ. ಈ ಬಾರಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾದ ಹಿನ್ನೆಲೆಯಲ್ಲಿ ಸಾಲ ತೀರಿಸುವ ಚಿಂತೆಯಿಂದ ಭೀಮಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನಿರ್ಣಾ ಪಿಕೆಪಿಎಸ್ ಬ್ಯಾಂಕ್ ನಲ್ಲಿ 1.30 ಲಕ್ಷ ರೂ., ಬೀದರ್ ಸೆಂಟ್ರಲ್ ಬ್ಯಾಂಕ್ ನಲ್ಲಿ 6.76 ಲಕ್ಷ ರೂ., ಎಸ್.ಬಿ.ಐ.ನಲ್ಲಿ 10,000 ರೂ. ಸೇರಿ ಇತರೆಡೆ ಅವರು ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ. ಬೇಮಳಖೇಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
