ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಪಟ್ಟಕ್ಕಾಗಿ ಆಟ ಜೋರಾಗಿದೆ. ಇಬ್ಬರೂ ನಾಯಕರು ಪರೋಕ್ಷವಾಗಿ ಶಾಸಕರ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿದೆ.
ಕಳೆದ ವಾರವಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ 9 ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಡಿ.ಕೆ.ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದರು. ಇಂದು 6 ಶಾಸಕರ ತಂಡ ದೆಹಲಿಗೆ ತೆರಳಿದ್ದು ಹೈಕಮಾಂಡ್ ನಾಯಕರ ಭೇಟಿಗಾಗಿ ಕಾಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮದ್ದೂರು ಶಾಸಕ ಕದಲೂರು ಉದಯ್ ನೇತೃತ್ವದ ಶಾಸಕರ ತಂಡ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಹುದ್ದೆ ನೀಡುವಂತೆ ಅವರ ಪರ ಮಾತುಕತೆಗಾಗಿ ಹೈಕಮಾಂಡ್ ನಾಯಕರ ಭೇಟಿಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಒಟ್ಟಾರೆ ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಒಲವು ತೋರಲಿದೆಯೇ? ಕಾದುನೋಡಬೇಕಿದೆ.
