ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿ ಮೀರಿದ ಹಿನೆಲೆಯಲ್ಲಿ ರೊಚ್ಚಿಗೆದ್ದಿರುವ ನಾಗರಿಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ದೆಹಲಿಯ ಇಂಡಿಯಾ ಗೇಟ್ ಬಳಿ ಹಲವರು ಪ್ರತಿಭಟನೆ ನಡೆಸಿದ್ದು, ಪ್ರತಿಭಟಣೆ ಹಿಂಸಾಚಾರಕ್ಕೆ ತಿರುಗಿದೆ. ಕೆಲವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸಿ-ಹೆಕ್ಸಾಗನ್ ಬಳಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ವಾಹನ ಸಂಚಾರಕ್ಕೆ ಅಡ್ಡಿಮಾಡದಂತೆ ಮನವಿ ಮಾಡಿದ್ದರು. ಇದರಿಂದ ಆಂಬುಲೆನ್ಸ್ ಘಾಗೂ ವೈದ್ಯಕೀಯ ಸಿಬ್ಬಂದಿಗಳ ಪ್ರಯಾಣಕ್ಕೆ ತೊಂದರೆಯಾಗುತ್ತದೆ ಎಂದು ತಿಳಿಸಿದ್ದರು. ಆದಾಗ್ಯೂ ಲೆಕ್ಕಿಸದ ಪ್ರತಿಭಟನಾಕಾರರು ಹೋರಾಟಕ್ಕೆ ಇಳಿದಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಮುಂದಾಗುತ್ತಿದ್ದಂತೆ ಪ್ರತಿಭಟನಾಕಾರರು ಪೊಲೀಸರ ಮೇಲೆ ಪೆಪ್ಪರ್ ಸ್ಫ್ರೇ ಸಿಂಪಡಿಸಿದ್ದಾರೆ. ಇದು ವಿಕೋಪಕ್ಕೆ ತಿರುಗಿದೆ.
ಪೆಪ್ಪರ್ ಸ್ಪ್ರೇ ಬಳಸಿ ಹಲ್ಲೆಗೆ ಮುಂದಾಗಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು 15 ಜನರನ್ನು ಬಂಧಿಸಿದ್ದಾರೆ.
