ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಅಕರಕ್ಕಾಗಿ ಕಿತ್ತಾಟ ಆರಂಭವಾಗಿದೆ. ರಾಜ್ಯದ ಅಭಿವೃದ್ಧಿ, ರೈತರ ಸಮಸ್ಯೆಗೆ ಪರಿಹಾರ ನೀಡುವುದು ಸರ್ಕಾರಕ್ಕೆ ಬೇಕಿಲ್ಲ. ಸಚಿವರು, ಶಾಸಕರು ಕಾಲಹರಣ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಆರ್.ಅಶೋಕ್, ಅತಿವೃಷ್ಟಿಯಿಂದ ರೈತರು ಬೆಳೆಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದರೂ ಒಬ್ಬನೇ ಒಬ್ಬ ಸಚಿವರು, ಶಾಸಕರು ತೆರಳಿ ರೌತರ ಸಮಸ್ಯೆ ಆಲಿಸಿಲ್ಲ, ಬೆಳೆ ಪರಿಹಾರ ನೀಡಿಲ್ಲ. ಜಲಸಂಪನ್ಮೂಲ ಸಚಿವರಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಕ್ಕಾಗಿ ತಮ್ಮ ಹೊಲಗಳಿಗೆ ನೀರು ಹರಿಸುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಾಯಕರು ದೆಹಲಿ ಟೂರ್ ನಲ್ಲಿ ಸಮಯ ಕಳೆಯುತ್ತಿದ್ದಾರೆ. ಸಚಿವರು, ಶಾಸಕರು ಸಿಎಂ ನಿವಾಸದಲ್ಲಿ ಬ್ರೇಕ್ ಫಾಸ್ಟ್, ಡಿಸಿಎಂ ಮನೆಯಲ್ಲಿ ಡಿನ್ನರ್ ಮಾಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ. ರಾಜ್ಯದ ಜನರ ಜನರ ಬಗ್ಗೆಯಾಗಲಿ, ರೈತರ ಬಗ್ಗೆಯಾಗಲಿ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
