ವಿಧಾನಸೌಧ ವೀಕ್ಷಿಸಲು ಆಗಮಿಸಿದ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಮಧು ಬಂಗಾರಪ್ಪ.!

ಬೆಂಗಳೂರು : ವಿಧಾನಸೌಧ ವೀಕ್ಷಿಸಲು ಆಗಮಿಸಿದ ಮಕ್ಕಳೊಂದಿಗೆ ಸಚಿವ ಮಧು ಬಂಗಾರಪ್ಪಸಂವಾದ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಸರ್ಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ 70 ವಿದ್ಯಾರ್ಥಿಗಳು ಬೆಂಗಳೂರಿನ ವಿಧಾನಸೌಧಕ್ಕೆ ಶಾಲಾ ಪ್ರವಾಸಕ್ಕೆಂದು ಆಗಮಿಸಿದ್ದ ವೇಳೆ ಸಚಿವರನ್ನ ಭೇಟಿಮಾಡಿದರು.

ಈ ಕುರಿತು ಸಚಿವ ಮಧು ಬಂಗಾರಪ್ಪ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. “ವಿಧಾನಸೌಧ ವೀಕ್ಷಿಸಿಲು ಆಗಮಿಸಿದ ಮಕ್ಕಳೊಂದಿಗೆ ಸಂವಾದ” ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಸರ್ಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ 70 ವಿದ್ಯಾರ್ಥಿಗಳು ಬೆಂಗಳೂರಿನ ವಿಧಾನಸೌಧಕ್ಕೆ ಶಾಲಾ ಪ್ರವಾಸಕ್ಕೆಂದು ಆಗಮಿಸಿದ್ದ ವೇಳೆ ನನ್ನನ್ನು ಭೇಟಿಮಾಡಿದರು. ಈ ವೇಳೆ ಮುದ್ದು ಮಕ್ಕಳೊಂದಿಗೆ ವಿವಿಧ ವಿಚಾರಗಳ ಕುರಿತು ಸಂವಾದ ನಡೆಸಿದ್ದು ಅತ್ಯಂತ ಸಂತಸವಾಗಿದೆ. ಈ ಪುಟಾಣಿ ವಿದ್ಯಾರ್ಥಿಗಳ ಮುಖದಲ್ಲಿ ಕಂಡ ಉತ್ಸಾಹ ಮತ್ತು ಶಿಸ್ತು ನಿಜಕ್ಕೂ ಪ್ರಶಂಸನೀಯ. ಅವರೊಂದಿಗೆ ಮಾತನಾಡುತ್ತಾ, ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಮಧ್ಯಾಹ್ನದ ಬಿಸಿಯೂಟ ಯೋಜನೆ ಮತ್ತು ಪೌಷ್ಟಿಕಾಂಶ ಹೆಚ್ಚಿಸುವ ಕಾರ್ಯಕ್ರಮಗಳಾದ (ಉಚಿತ ಕೆನೆಭರಿತ ಹಾಲು/ ಸಾಯಿ ಸೂರ್/ ಬಾಳೆಹಣ್ಣು ಮತ್ತು ಮೊಟ್ಟೆ ವಿತರಣೆ) ಇವುಗಳಿಂದ ಅವರಿಗೆ ಆಗುತ್ತಿರುವ ಅನುಕೂಲಗಳ ಬಗ್ಗೆ ಅವರ ಅನುಭವಗಳ ಮಾಹಿತಿ ಪಡೆದೆನು.

ಈ ಸೌಲಭ್ಯಗಳು ಅವರಿಗೆ ಆರೋಗ್ಯ ಮತ್ತು ಕಲಿಕೆಯಲ್ಲಿ ನೆರವಾಗುತ್ತಿರುವುದನ್ನು ತಿಳಿದು ಬಹಳ ಸಂತೋಷವಾಯಿತು. ನಮ್ಮ ಮಕ್ಕಳು ಚೆನ್ನಾಗಿ ಓದಬೇಕು, ಚೆನ್ನಾಗಿ ಬೆಳೆಯಬೇಕು ಎಂಬುದು ನಮ್ಮ ಧ್ಯೇಯ ಹಾಗೂ ಉದ್ದೇಶವಾಗಿದೆ. ಗುಣಮಟ್ಟದ ಶಿಕ್ಷಣ ಮತ್ತು ಸೌಲಭ್ಯಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಈ ಚಿಣ್ಣರ ಭವಿಷ್ಯವನ್ನು ಉಜ್ವಲಗೊಳಿಸಲು ನಾವು ಬದ್ಧರಾಗಿದ್ದೇವೆ. ನಿಮ್ಮೆಲ್ಲರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದೆನು ಎಂದು ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read