ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಕೆಲವು ನಾಯಕರು ಅವರನ್ನು ಭೇಟಿಯಾಗಿ ರಾಜ್ಯದಲ್ಲಿನ ಬೆಳವಣಿಗೆ ಕುರಿತಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ.
ಇಂದು ರಾತ್ರಿ 11 ಗಂಟೆಗೆ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ ಬರಲಿದ್ದಾರೆ. ಏರ್ಪೋರ್ಟ್ ಬಳಿಯ ತಾಜ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ವೇಳೆ ಕೆಲವು ರಾಜ್ಯ ನಾಯಕರು ಭೇಟಿಯಾಗುವ ಸಾಧ್ಯತೆ ಇದೆ. ಭೇಟಿಯಾಗಿ ರಾಜ್ಯದಲ್ಲಿ ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಕುರಿತಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ.
ನಾಳೆ ಬೆಳಗ್ಗೆ ವೇಣುಗೋಪಾಲ್ ಕೇರಳದ ವಯನಾಡಿಗೆ ತೆರಳಲಿದ್ದಾರೆ. ಇಂದು ಅವರು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯದ ಕೆಲವು ನಾಯಕರು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
