HomeLatest Newsಜಲಜೀವನ್ ಮಿಷನ್ ಯೋಜನೆ ಅನುದಾನ ನೀಡದೆ ಕೇಂದ್ರದ ತಾರತಮ್ಯ

ಜಲಜೀವನ್ ಮಿಷನ್ ಯೋಜನೆ ಅನುದಾನ ನೀಡದೆ ಕೇಂದ್ರದ ತಾರತಮ್ಯ

ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನಲ್ಲ. ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ ಪುರಸ್ಕೃತ ಯೋಜನೆಯಾದರೂ, ವಾಸ್ತವದಲ್ಲಿ ಕರ್ನಾಟಕದ ಮಟ್ಟಿಗೆ ಕೇಂದ್ರ ತಿರಸ್ಕಾರ ಯೋಜನೆಯಾಗಿದೆ ಎನ್ನಬಹುದು.

– ಪ್ರಸಕ್ತ ಸಾಲಿನವರೆಗೆ JJM ಯೋಜನೆಗಾಗಿ ಒಟ್ಟು ₹35,698.58 ಕೋಟಿ ಖರ್ಚು ಮಾಡಲಾಗಿದೆ.

– ಇದರಲ್ಲಿ ರಾಜ್ಯ ಸರ್ಕಾರ ಖರ್ಚು ಮಾಡಿರುವುದು ₹24,598.45 ಕೋಟಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

– ಇದುವರೆಗೂ ಕೇಂದ್ರ ಸರ್ಕಾರ ಕೊಟ್ಟಿರುವುದು ₹11,786. 63 ಕೋಟಿ ಮಾತ್ರ.

– ಪ್ರಸಕ್ತ ಸಾಲಿನವರೆಗೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಬೇಕಾದ ಮೊತ್ತ ₹13,004.63 ಕೋಟಿ

ಕರ್ನಾಟಕದೆಡೆಗಿನ ಬಿಜೆಪಿಯ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಹೇಗಿದೆ ಎಂದು ನೋಡುವುದಾದರೆ, 2024-25ನೇ ಆರ್ಥಿಕ ಸಾಲಿನಲ್ಲಿ JJM ಯೋಜನೆಗಾಗಿ ₹3,804.41 ಕೋಟಿಯನ್ನು ಕರ್ನಾಟಕಕ್ಕೆ ಹಂಚಿಕೆ ಮಾಡಿತ್ತು. ಆದರೆ ಬಿಡುಗಡೆಯಾದ ಮೊತ್ತ ಕೇವಲ ₹570.66 ಕೋಟಿ ಮಾತ್ರ. ಯೋಜನೆಯ ಜಾರಿಗಾಗಿ ರಾಜ್ಯ ಸರ್ಕಾರವೇ ಆಸಕ್ತಿವಹಿಸಿ ಹಣ ಖರ್ಚು ಮಾಡಿದೆ. ಆದರೆ ಕೇಂದ್ರ ಸರ್ಕಾರದ ಅನ್ಯಾಯ ಮಾತ್ರ ಮುಂದುವರೆಯುತ್ತಲೇ ಇದೆ.

ಈ ಹಿಂದೆಯೂ JJM ಯೋಜನೆಯ ಬಾಕಿ ಮೊತ್ತವನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು. ಈಗಲೂ ಮತ್ತೊಮ್ಮೆ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರದ ಇಂತಹ ಅನ್ಯಾಯಗಳಿಂದ, ನಿರ್ಲಕ್ಷ್ಯದಿಂದ, ಕರ್ನಾಟಕದೆಡೆಗಿನ ದ್ವೇಷದಿಂದ ರಾಜ್ಯದ ಆರ್ಥಿಕ ಪ್ರಗತಿಗೆ ಪೆಟ್ಟು ಬೀಳುತ್ತಿದ್ದರೂ, ರಾಜ್ಯದ ಯಾವೊಬ್ಬ ಬಿಜೆಪಿ ನಾಯಕರು ಕರ್ನಾಟಕದ ಪರವಾಗಿ ಧ್ವನಿ ಎತ್ತುವ, ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡದಿರುವುದು ಬಿಜೆಪಿಯ ರಾಜಕೀಯ ಮತ್ತು ನೈತಿಕ ದಿವಾಳಿತನಕ್ಕೆ ಸಾಕ್ಷಿ. ಬಿಜೆಪಿ ನಿಜಕ್ಕೂ ರಾಜ್ಯದ ಪರವಾಗಿ ಕಾಳಜಿ ಇದ್ದರೆ, ಸರ್ಕಾರದ ಒತ್ತಾಯಕ್ಕೆ ದನಿಗೂಡಿಸಿ ತಮ್ಮ ಬದ್ಧತೆಯನ್ನು ನಿರೂಪಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular