ಬೆಂಗಳೂರು: ವೇತನ ಹೆಚ್ಚಳ ಮತ್ತು ವೇತನ ಹಿಂಬಾಕಿಗೆ ಒತ್ತಾಯಿಸಿ ಹೋರಾಟ ಕೈಗೊಂಡಿದ್ದ ಸಾರಿಗೆ ನೌಕರರ ಸಂಘಟನೆಗಳ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಸಭೆ ನಡೆಸಲಿದ್ದಾರೆ.
ವೇತನ ಹೆಚ್ಚಳ ಮತ್ತು 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಪಾವತಿಗೆ ಒತ್ತಾಯಿಸಿ ಸಾರಿಗೆ ನೌಕರರು ಆಗಸ್ಟ್ ನಲ್ಲಿ ಮುಷ್ಕರ ಕೈಗೊಂಡಿದ್ದರು. ಆಗ ಹೈಕೋರ್ಟ್ ನಿರ್ದೇಶನದಂತೆ ನೌಕರರು ಮುಷ್ಕರದಿಂದ ಹಿಂದೆ ಸರಿದಿದ್ದರು. ನಂತರ ಸಾರಿಗೆ ನೌಕರರ ಬೇಡಿಕೆ ಆಲಿಸಿ ಈಡೇರಿಸುವ ಕೆಲಸ ಮಾಡಿಲ್ಲ. ಹೀಗಾಗಿ ಸರ್ಕಾರದ ವಿರುದ್ಧ ಹೋರಾಟ ಕೈಗೊಳ್ಳಲು ನವೆಂಬರ್ 28 ರಂದು ಕೆಎಸ್ಆರ್ಟಿಸಿ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.
ಈ ಸಭೆ ನಡೆಯುವ ಮೊದಲ ನೌಕರರ ಸಂಘಟನೆಗಳ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಸಭೆ ನಡೆಸಲಿದ್ದಾರೆ.
ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ನೌಕರರ ಬೇಡಿಕೆ ಬಗ್ಗೆ ಬುಧವಾರ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು. ನಾವು ಒಂದು ಹೆಜ್ಜೆ ಇಟ್ಟರೆ ಸಾರಿಗೆ ನೌಕರರ ಸಂಘಟನೆಗಳು ಕೂಡ ಒಂದು ಹೆಜ್ಜೆ ಇಡಬೇಕು. ಆಗ ನೌಕರರ ಸಮಸ್ಯೆ ನಿವಾರಣೆಯಾಗಲಿದೆ ಎಂದು ಹೇಳಿದ್ದಾರೆ.
