ಬೆಂಗಳೂರು : ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಯುವಕನನ್ನು ಮಹಿಳೆಯ ಕುಟುಂಬಸ್ಥರು ಥಳಿಸಿ ಹತ್ಯೆಗೈದ ಘಟನೆ ಬೆಂಗಳೂರಿನ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನ ನರಸಿಂಹರಾಜು (32) ಎಂದು ಗುರುತಿಸಲಾಗಿದೆ. ಈತ ಮದುವೆಯಾಗಿದ್ದ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎಂದು ಶಂಕಿಸಲಾಗಿದೆ. ಆಗಾಗ ಯುವಕನ ಮನೆಗೆ ಮಹಿಳೆ ಕೂಡ ಬರುತ್ತಿದ್ದಳು. ಒಂದು ದಿನ ನರಸಿಂಹರಾಜು ಜೊತೆ ಮನೆಯಲ್ಲಿ ಮಹಿಳೆ ಇರುವುದನ್ನು ನೋಡಿದ ಮಹಿಳೆ ಕುಟುಂಬಸ್ಥರು ಆತನನ್ನು ಮನೆಯಿಂದ ಹೊರಗಡೆ ಎಳೆದುಕೊಂಡು ಬಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಯುವಕನನ್ನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕ ಮೃತಪಟ್ಟಿದ್ದಾನೆ. ಈ ಕುರಿತು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
