ದಾವಣಗೆರೆ: ನಾಪತ್ತೆಯಾಗಿದ್ದ ಇಬ್ಬರು ಯುವಕರು ಕುಂದವಾಡ ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಶಾಂತಿನಗರ ಚೇತನ್ (22), ಮನು (23) ಮೃತ ದುರ್ದೈವಿಗಳು. ಇಬ್ಬರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಕುಟುಂಬದವರು ತೀವ್ರ ಹುಡುಕಾಟ ನಡೆಸಿದ್ದರು. ಇಂದು ಬೆಳಿಗ್ಗೆ ಯುವಕರಿಬ್ಬರ ಶವ ಕುಂದವಾಡ ಕೆರೆಯಲ್ಲಿ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
