ಚಿಕ್ಕಮಗಳೂರು : ಮೆಡಿಕಲ್ ಕಾಲೇಜು ಪ್ರೊಫೆಸರ್ ವಿದ್ಯಾರ್ಥಿನಿಗೆ ‘ಅಶ್ಲೀಲ ಮೆಸೇಜ್’ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಮೆಡಿಕಲ್ ಕಾಲೇಜಿನ ಅನಾಟಮಿ ಪ್ರೊ. ಗಂಗಾಧರ್ ವಿರುದ್ಧ ಆರೋಪ ಕೇಳಿಬಂದಿದ್ದು, ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
2023 ರಿಂದ ಗಂಗಾಧರ್ ಅವರು ನನಗೆ ನಿರಂತರವಾಗಿ ವಾಟ್ಸಾಪ್ ನಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ. ಬೆಂಗಳೂರು ಮೂಲದ ಮೂರನೇ ಸೆಮಿಸ್ಟರ್ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಸೂಕ್ತ ಸಮಜಾಯಿಷಿ ನೀಡುವಂತೆ ಸಂಸ್ಥೆಯ ಡೀನ್ ಹರೀಶ್ ಗಂಗಾಧರ್ ಗೆ ನೋಟಿಸ್ ನೀಡಿದ್ದಾರೆ.
