HomeLatest NewsBIG NEWS: ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: 3 ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ...

BIG NEWS: ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: 3 ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿಶುದ್ಧತೆಗೆ ಹೆಸರಾದ ರಾಜ್ಯದ ಹೆಮ್ಮೆಯ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ವಿದೇಶಗಳಿಗೆ ನಂದಿನಿ ತುಪ್ಪ ರಫ್ತು ಮಾಡಲಾಗುತ್ತಿದೆ. ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .

ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ನಂದಿನಿ ತುಪ್ಪದ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿ ಹೈ ಕಮಾಂಡ್ ಅವರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದರು. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು.

For Latest News Updates, Join Our Whatsapp Community🚩
RELATED ARTICLES

Most Popular