ಬೆಳಗಾವಿ : ತಾಯಿಯೊಬ್ಬಳು ಕತ್ತು ಹಿಸುಕಿ ತನ್ನ ಮಗುವನ್ನೇ ಕೊಂದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ರಾಮದುರ್ಗದ ಹಿರೇಮುಲಂಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಶ್ವಿನಿ ಹಳಕಟ್ಟಿ (28) ಎಂಬ ಮಹಿಳೆ ಈ ಕೃತ್ಯ ಎಸಗಿದ್ದಾಳೆ.
ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ ತಾಯಿ ಅಶ್ವಿನಿ ನಾಲ್ಕನೆ ಮಗು ಹೆಣ್ಣಾಗಿದ್ದಕ್ಕೆ ಸಿಟ್ಟಿಗೆದ್ದು ಮಗುವಿನ ಕತ್ತು ಹಿಸುಕಿ ಕೊಂದಿದ್ದಾಳೆ.
ಈ ಮೊದಲು ಅಶ್ವಿನಿಗೆ ಮೂರು ಹೆಣ್ಣು ಮಕ್ಕಳಿದ್ದವು. ನಾಲ್ಕನೆಯದು ಗಂಡು ಆಗುತ್ತದೆ ಎಂದು ಅಶ್ವಿನಿ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಳು. ಆದರೆ ನಾಲ್ಕನೆ ಬಾರಿ ಹೆಣ್ಣು ಹುಟ್ಟಿದ್ದು, ಇದರಿಂದ ಬೇಸತ್ತ ಮಹಿಳೆ ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ.
