ಆನೇಕಲ್: ರಸ್ತೆಗುಂಡಿ ತಪ್ಪಿಸಲು ಹೋಗಿ ಜಲ್ಲಿ ಕಲ್ಲುತುಂಬಿದ್ದ ಲಾರಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಘಟನೆಯಲ್ಲಿ ನಾಪತ್ತೆಯಾಗಿದ್ದ ಲಾರಿ ಚಾಲಕ ಸಾವನ್ನಪ್ಪಿರುವುದು ದೃಢಪಟ್ಟಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ-ಸರ್ಜಾಪುರ ರಸ್ತೆಯಲ್ಲಿ ಬಿದರಿಗುಪ್ಪೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಕೆರೆಗೆ ಬಿದ್ದಿತ್ತು. ಘಟನೆಯಲ್ಲಿ ಲಾರಿ ಚಾಲಕ ನಾಪತ್ತೆಯಾಗಿದ್ದ. ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು ಕ್ರೇನ್ ಸಹಾಯದಿಂದ ಲಾರಿಯನ್ನು ಮೇಲಕೆತ್ತಿದ್ದಾರೆ. ಈ ವೇಳೆ ಲಾರಿ ಚಾಲನ ಶವ ಕೂಡ ಪತ್ತೆಯಾಗಿದೆ.
ಕಲಬುರಗಿ ಮೂಲದ ಲಾರಿ ಚಾಲಕ ಮಹೇಶ್ (37) ಮೃತ ದುರ್ದೈವಿ. ಅತ್ತಿಬೆಲೆಯ ಆಕ್ಸ್ ಫರ್ಡ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.
