ಧಾರವಾಡ: ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ಧಾರವಾಡ ಹೈಕೋರ್ಟ್ ಪೀಠ ರಿಲೀಫ್ ನೀಡಿದೆ. ಧಾರವಾದ ಜಿಲ್ಲಾ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿ ಆದೇಶ ಹೊರಡಿಸಿದೆ.
ನವೆಂಬರ್ 5ರಂದು ಧಾರವಾಡ ಜಿಲೆಯ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿಯಲ್ಲಿ ಕನ್ನೇರಿ ಶ್ರೀಗಳ ಕಾರ್ಯಕ್ರಮವಿತ್ತು. ಆದರೆ ಜಿಲ್ಲಾಧಿಕಾರಿ ಕನ್ನೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರು. ವೀರಶೈವ ಲಿಂಗಾಯಿತ ಮಠಾಧೀಶರ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಕನ್ನೇರಿ ಶ್ರೀಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಜಿಲ್ಲಾಧಿಕಾರಿ ಆದೇಶ ಪ್ರಶ್ನಿಸಿ ಕನ್ನೇರಿ ಶ್ರೀಗಳು ಧಾರವಾಡ ಹೈಕೋರ್ಟ್ ಮೆಟ್ಟಿಲೇರ್ದ್ದರು.
ಅರ್ಜಿ ವಿಚಾರಣೆ ನಡೆಸಿದ್ದ ಧಾರವಾಡ ಹೈಕೋರ್ಟ್ ಪೀಠ ಕನ್ನೇರಿ ಶ್ರೀಗಳ ನಿರ್ಬಂಧ ತೆರವುಗೊಳಿಸಿ ಆದೇಶ ಹೊರಡಿಸಿದೆ.
