ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡದ ಸದಸ್ಯರಿಗೆ ತಲಾ 2 ಲಕ್ಷ ರೂ., ರಾಜ್ಯದ ಆಟಗಾರ್ತಿಯರಿಗೆ 10 ಲಕ್ಷದ ಜತೆಗೆ ಸರ್ಕಾರಿ ಉದ್ಯೋಗ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡದ ಸದಸ್ಯರಿಗೆ ಅಭಿನಂದಿಸಿದ ಸಿಎಂ ಸಿದ್ಧರಾಮಯ್ಯ ಮುಂದಿನ ಕ್ರೀಡಾ ಬದುಕು ಹೀಗೆಯೇ ಯಶಸ್ಸುಗಳಿಂದ ಕೂಡಿರಲಿ ಎಂದು ಶುಭ ಹಾರೈಸಿದ್ದಾರೆ.

ಭಾರತ ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಅದ್ಭುತ ಆಟ ಈ ಪಂದ್ಯಾವಳಿಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತ್ತು ಎಂಬುದನ್ನು ಇದೇ ವೇಳೆ ಸ್ಮರಿಸಿ, ಶ್ಲಾಘಿಸಿದ್ದಾರೆ.

ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ನೀಡಲಾಗುವುದು.

ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುತ್ತದೆ. ಇದರಿಂದ ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದು, ಆಟಗಾರ್ತಿಯರಿಗೆ ಶುಭ ಹಾರೈಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read