ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಗನವಾಡಿ ಕೇಂದ್ರವೊಂದರಲ್ಲಿ ಸಹಾಯಕಿಯ ಪುತ್ರನೇ ಐದು ವರ್ಷದ ಪುಟ್ಟ ಮಗುವಿನ ಮೇಲೆ ಅತ್ಯಾಚಾರ ಮಾಡಿರುವ ಹೇಯಕೃತ್ಯ ನಡೆದಿದೆ.
ಬಾದಾಮಿಯ ಮಕ್ಕಳ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ದಸ್ತಗಿರಿ ಸಾಬ್ ಮುಲ್ಲಾ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆಗಮಿಸಿ ಪೊಲೀಸ್ ಠಾಣೆ ಆವರಣದಲ್ಲಿ ಮಗುವನ್ನು ಕೂರಿಸಿಕೊಂಡು ಸಾರ್ವಜನಿಕರ ಎದುರು ಆಪ್ತ ಸಮಾಲೋಚನೆ ನಡೆಸಿದ್ದು ಆಕ್ರೋಶಕ್ಕೆ ಕಾರಣವಾಗಿದೆ.
