ಚಿತ್ರದುರ್ಗದ ಮುರುಘಾ ಶರಣರ ವಿರುದ್ಧದ ಪೋಕ್ಸೊ ಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಯನ್ನು ಬಂಧಿಸಲಾಗುವುದೇ ಅಥವಾ ಬಿಡುಗಡೆಯ ಮಾಡಲಾಗುವುದೇ ಎನ್ನುವುದರ ಬಗ್ಗೆ ಎಂದು ನಿರ್ಧಾರ ಕೈಗೊಳ್ಳಲಾಗುವುದು.
ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಇಂದು ತೀರ್ಪು ಪ್ರಕಟಿಸಲಾಗುವುದು. ನ್ಯಾಯಮೂರ್ತಿ ಗಂಗಾಧರಪ್ಪ ಚೆನ್ನಬಸಪ್ಪ ಹಡಪದ ತೀರ್ಪು ಪ್ರಕಟಿಸಲಿದ್ದಾರೆ. ಬೆಳಗ್ಗೆ 11:30 ಬೆಳಗ್ಗೆ ಸ್ವಾಮೀಜಿ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ. ಆರೋಪ ಸಾಬೀತಾದರೆ ಕನಿಷ್ಠ 20 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇದೆ.
ಎ1 ಮುರುಘಾ ಶರಣರು, ಎ2 ವಾರ್ಡನ್ ರಶ್ಮಿ, ಎ5 ಮಠದ ಮ್ಯಾನೇಜರ್ ಪರಮಶಿವಯ್ಯ ಇಂದು ಕೋರ್ಟ್ ಗೆ ಹಾಜರಾಗಲಿದ್ದಾರೆ. ಆರೋಪಿತರಲ್ಲಿ ಎ3 ಬಸವಾದಿತ್ಯ ಮತ್ತು ಎ5 ವಕಕೀಲ ಗಂಗಾಧರಯ್ಯ ಅವರನ್ನು ಚಾರ್ಜ್ ಶೀಟ್ ನಿಂದ ಕೈಬಿಡಲಾಗಿದೆ.
