HomeLatest NewsBREAKING : ವಿದ್ಯಾರ್ಥಿನಿಗೆ 'ಅಶ್ಲೀಲ ಮೆಸೇಜ್' ಕಳುಹಿಸಿ ಲೈಂಗಿಕ ಕಿರುಕುಳ : 'ಮೆಡಿಕಲ್ ಕಾಲೇಜು'...

BREAKING : ವಿದ್ಯಾರ್ಥಿನಿಗೆ ‘ಅಶ್ಲೀಲ ಮೆಸೇಜ್’ ಕಳುಹಿಸಿ ಲೈಂಗಿಕ ಕಿರುಕುಳ : ‘ಮೆಡಿಕಲ್ ಕಾಲೇಜು’ ಪ್ರೊಫೆಸರ್ ವಿರುದ್ಧ FIR ದಾಖಲು.!

ಚಿಕ್ಕಮಗಳೂರು : ಅಶ್ಲೀಲ ಮೆಸೇಜ್ ಕಳುಹಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಮೆಡಿಕಲ್ ಕಾಲೇಜು ಪ್ರೊಫೆಸರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪ್ರೊ.ಗಂಗಾಧರ್ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಚಿಕ್ಕಮಗಳೂರಿನ ಮೆಡಿಕಲ್ ಕಾಲೇಜು ಪ್ರೊಫೆಸರ್ ಡಾ.ಗಂಗಾಧರ್ ವಿರುದ್ಧ ವಿದ್ಯಾರ್ಥಿನಿ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಈ ಬೆನ್ನಲ್ಲೇ ಎಫ್ ಐ ಆರ್ ದಾಖಲಿಸಲಾಗಿದೆ. ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಬೆಂಗಳೂರು ಮೂಲದ ಮೆಡಿಕಲ್ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದು, ಪ್ರೊಫೆಸರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಈಗಾಗಲೇ ವಿದ್ಯಾರ್ಥಿನಿ ಕಾಲೇಜು ಡೀನ್ ಗೆ ದೂರು ನೀಡಿದ್ದರು. ಡಾ.ಗಂಗಾಧರ್ ಗೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಇದೀಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 2023ರಿಂದ ಡಾ.ಗಂಗಾಧರ್ ವಿದ್ಯಾರ್ಥಿನಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದನಂತೆ. ಪ್ರಕರಣ ಮುಚ್ಚಿಹಾಕುವ ಯತ್ನ ಕೂಡ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023 ರಿಂದ ಗಂಗಾಧರ್ ಅವರು ನನಗೆ ನಿರಂತರವಾಗಿ ವಾಟ್ಸಾಪ್ ನಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ. ಬೆಂಗಳೂರು ಮೂಲದ ಮೂರನೇ ಸೆಮಿಸ್ಟರ್ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಸೂಕ್ತ ಸಮಜಾಯಿಷಿ ನೀಡುವಂತೆ ಸಂಸ್ಥೆಯ ಡೀನ್ ಹರೀಶ್ ಗಂಗಾಧರ್ ಗೆ ನೋಟಿಸ್ ನೀಡಿದ್ದರು. ಇದೀಗ ಎಫ್ ಐ ಆರ್ ಕೂಡ ದಾಖಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular