ಕಲಬುರಗಿ : ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿಯ ಸ್ನೇಹಿತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮೃತರನ್ನ ಈರಣ್ಣ ಶಿರಸಂಗಿ ಎಂದು ಗುರುತಿಸಲಾಗಿದೆ. ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈರಣ್ಣ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಕೂಡ ಮೃತಪಟ್ಟಿದ್ದಾರೆ.
ಹಿರಿಯ ಐಎಎಸ್ ಅಧಿಕಾರಿ, ಖನಿಜ ನಿಗಮದ ಎಂಡಿ ಮಹಾಂತೇಶ್ ಬಿಳಗಿ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಮಹಾಂತೇಶ್ ಬಿಳಗಿ ಸೇರಿ ಮೂವರು ಮೃತಪಟ್ಟಿದ್ದರು. ಇದೀಗ ಮತ್ತೋರ್ವ ವ್ಯಕ್ತಿ ಕೂಡ ಮೃತಪಟ್ಟಿದ್ದಾರೆ.
ಕಲಬುರಗಿ ಜಿಲ್ಲೆ ಜೇವರ್ಗಿ ಬೈಪಾಸ್ ಬಳಿ ಅವರು ಇನೋವಾ ಕಾರ್ ಅಪಘಾತಕ್ಕೀಡಾಗಿದೆ. ಮಹಾಂತೇಶ್ ಬಿಳಗಿ ಪ್ರಯಾಣಿಸುತ್ತಿದ್ದ ಕಾರ್ ನಲ್ಲಿದ್ದ ಐದು ಜನರ ಪೈಕಿ ನಾಲ್ವರು ಮೃತಪಟ್ಟಿದ್ದಾರೆ.ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ, ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಮಹಾಂತೇಶ್ ಬಿಳಗಿ ಅವರು ಜನಾನುರಾಗಿಯಾಗಿದ್ದರು. ಬೆಸ್ಕಾಂ ಎಂಡಿಯಾಗಿ ಕಾರ್ಯ ನಿರ್ವಹಿಸಿದ್ದರು. ಖನಿಜ ನಿಗಮದ ಎಂಡಿಯಾಗಿದ್ದರು. ಸಂಬಂಧಿಕರ ಮದುವೆಗಾಗಿ ಕಲಬುರಗಿಗೆ ತೆರಳುತ್ತಿದ್ದಾಗ ಕಾರ್ ಅಪಘಾತಕ್ಕೀಡಾಗಿದೆ.
