ಜಂಜ್ ಗೀರ್: ಎಸ್ ಯುವಿ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಜಂಜ್ ಗೀರ್ -ಚಂಪಾ ಜಿಲ್ಲೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ವಿಶ್ವನಾಥ್ ದೇವಾಂಗನ್, ರಾಜೇಂದ್ರ ಕಶ್ಯಪ್, ಪೋಮೇಶ್ವರ್ ಜಲತಾರೆ, ಭೂಪೇಮ್ದ್ರ ಸಾಹು, ಕಮಲನಯನ್ ಸಾಹು ಎಂದು ಗುರುತುಸಲಾಗಿದೆ.
ಅಪಘಾತದ ರಭಸಕ್ಕೆ ಎಸ್ ಯುವಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
