ಕೊಪ್ಪಳ : ರಾಜ್ಯದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಎಸ್ ಎಸ್ ಎಲ್ ಸಿ ಓದುತ್ತಿದ್ದ ಬಾಲಕಿ ಮಗುವಿಗೆ ಜನ್ಮ ನೀಡಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವಸತಿ ಶಾಲೆಯ ವಸತಿ ನಿಲಯದಲ್ಲಿ ನಡೆದಿದೆ.
ಕುಕನೂರು ಶಾಲೆಯಲ್ಲಿ ಓದುತ್ತಿದ್ದ 10 ನೇ ತರಗತಿ ವಿದ್ಯಾರ್ಥಿನಿಗೆ ಧಿಡೀರ್ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಕೂಡಲೇ ಕೊಪ್ಪಳದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅಪ್ರಾಪ್ತ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಕೂಡಲೇ ಕುಕನೂರು ಪೊಲೀಸರು ವಿಚಾರಣೆ ನಡೆಸಿ ಬಾಲಕಿಯನ್ನ ಗರ್ಭಿಣಿ ಮಾಡಿದ ಯುವಕನನ್ನ ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಲಕಿ ಹಾಸ್ಟೆಲ್ ನಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದಳು. ವಿಷಯ ಗೊತ್ತಿದ್ದರೂ ಹಾಸ್ಟೆಲ್ ಸಿಬ್ಬಂದಿಗಳು ಸುಮ್ಮನೆ ಇದ್ದರೆ ಎಂದು ಪೋಷಕರು ಕಿಡಿಕಾರಿದ್ದಾರೆ.
