HomeLatest Newsಹಿಂದುಳಿದ, ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಹಿಂದುಳಿದ, ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ‌ ಅವಧಿ ವಿಸ್ತರಣೆ ಮಾಡಲಾಗಿದೆ.

2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ/ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗಳಿಗೆ ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಡಿ.20 ರವರೆಗೆ  ವಿಸ್ತರಿಸಲಾಗಿದೆ.

ಅರ್ಜಿಯನ್ನು https://ssp.postmatric.karnataka.gov.in ವೆಬ್‌ಸೈಟ್ ಮೂಲಕ ಸಲ್ಲಿಸಬೇಕು. ಹಾಗೂ https://bcwd.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಕಾರ್ಯಕ್ರಮದ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಮಾಹಿತಿ ಪಡೆಯಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ದೂ.ಸಂ;8050770005 ಹಾಗೂ [email protected] ಗೆ ಸಂಪರ್ಕಿಸಬಹುದು, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶಕ್ಕಾಗಿ ಸಹಾಯವಾಣಿ ಸಂ: 1902 ಹಾಗೂ [email protected]  ಗೆ ಸಂಪರ್ಕಿಸಬಹುದೆಂದು ಶಿವಮೊಗ್ಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular