HomeLatest NewsBREAKING : ರಾಜ್ಯದ 4 ಹೊಸ ಪಟ್ಟಣ ಪಂಚಾಯಿತಿ, 2 ವಾರ್ಡ್ ಗಳಿಗೆ ಚುನಾವಣೆ ಘೋಷಣೆ...

BREAKING : ರಾಜ್ಯದ 4 ಹೊಸ ಪಟ್ಟಣ ಪಂಚಾಯಿತಿ, 2 ವಾರ್ಡ್ ಗಳಿಗೆ ಚುನಾವಣೆ ಘೋಷಣೆ : ವೇಳಾಪಟ್ಟಿ ಬಿಡುಗಡೆ


ಬೆಂಗಳೂರು : ಹೊಸದಾಗಿ ರಚನೆಯಾಗಿರುವ 04 ಪಟ್ಟಣ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಘೋಷಣೆ ಮಾಡಲಾಗಿದೆ.

ರಾಜ್ಯ ಚುನಾವಣಾ ಆಯೋಗವು ಸಂವಿಧಾನದ ಪರಿಚ್ಛೇದ 243-ಜೆಡ್ಎ ರಲ್ಲಿ ಪ್ರದತ್ತವಾದ ಅಧಿಕಾರದ ಮೇರೆಗೆ ಕರ್ನಾಟಕ ಪೌರಸಭೆಗಳ ಅಧಿನಿಯಮ, 1964 ರ ಪ್ರಕರಣ 17 ಮತ್ತು 19 ಹಾಗೂ ಕರ್ನಾಟಕ ಪೌರಸಭೆಗಳ (ಕೌನ್ಸಿಲರುಗಳ ಚುನಾವಣೆ) ನಿಯಮಗಳು, 1977ರ ನಿಯಮ 3(1) ರನ್ವಯ ಅನುಬಂಧ-01 ರಲ್ಲಿ ಹೆಸರಿಸಲಾದ ಹೊಸದಾಗಿ ರಚನೆಯಾಗಿರುವ 04 ಪಟ್ಟಣ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಅನುಬಂಧ -02 ರಲ್ಲಿ ಹೆಸರಿಸಲಾದ ವಾರ್ಡುಗಳಿಗೆ ಉಪ ಚುನಾವಣೆಯನ್ನು ಈ ಕೆಳಕಂಡ ಚುನಾವಣಾ ವೇಳಾಪಟ್ಟಿಯನುಸಾರ ನಡೆಸಲು ಆದೇಶಿಸಲಾಗಿದೆ.

ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನ 02/12/2025
ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ 09/12/2025 ಮಂಗಳವಾರ

ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ 10/12/2025 ಬುಧವಾರ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮತ್ತು ದಿನ 12/12/2025 ಶುಕ್ರವಾರ
ಮತದಾನ ಅವಶ್ಯಕವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ (ಸಮಯ ಬೆಳಿಗ್ಗೆ 7.00 ಗಂಟೆಯಿಂದ ಸಾಯಂಕಾಲ 5.00 ಗಂಟೆಗಳ ವರೆಗೆ) 21/12/2025 ಭಾನುವಾರ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular