BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಡಿ. 3 ರಂದು ವಿಶ್ವ ವಿಶೇಷ ಚೇತನರ ದಿನಾಚರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಡಿ. 3 ರಂದು ವಿಶ್ವ ವಿಶೇಷ ಚೇತನರ ದಿನಾಚರಣೆ ಆಚರಿಸುವಂತೆ ಆದೇಶ ಹೊರಡಿಸಲಾಗಿದೆ.

ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯ 47/3 ರಂತೆ ಪ್ರತಿ ವರ್ಷ ಡಿಸೆಂಬರ್ -03 ರಂದು ವಿಶ್ವ ವಿಶೇಷ ಚೇತನರ ದಿನಾಚರಣೆ ಆಚರಿಸಲು ನಿರ್ಣಯವಾಗಿರುವ ಹಿನ್ನೆಲೆಯಲ್ಲಿ ಈ ಕೆಳ ಕಾಣಿಸಿರುವ ವಿಶ್ವ ವಿಶೇಷ ಚೇತನರ ದಿನಾಚರಣೆಯ ಉದ್ದೇಶಗಳನ್ನು ಅರಿತು ಸರ್ಕಾರಿ ಶಾಲೆಗಳಲ್ಲಿ ಬಹಳ ಅರ್ಥ ಪೂರ್ಣವಾಗಿ ಆಚರಿಸುವುದು.
ವಿಶ್ವ ವಿಶೇಷ ಚೇತನರ ದಿನಾಚರಣೆಯ ಉದ್ದೇಶಗಳು

ವಿಶೇಷ ಚೇತನರ ಸಮಸ್ಯೆಗಳನ್ನು ಅರಿಯುವುದು ಮತ್ತು ಇವರ ಆತ್ಮ ಗೌರವವನ್ನು ಹೆಚ್ಚಿಸುವ ಹಕ್ಕುಗಳನ್ನು ರಕ್ಷಿಸುವ ಮತ್ತು ಇವರ ಒಳಿತಿಗಾಗಿ ಕ್ರಮವಹಿಸುವುದಾಗಿದೆ.

ವಿಶೇಷ ಚೇತನರನ್ನು ಮುಖ್ಯವಾಹಿನಿಗೆ ಸೇರಿಸುವ ಕುರಿತು ಜಾಗೃತಿ, ಸಮಾನ ಅವಕಾಶ, ಸೌಲಭ್ಯ ಕಲ್ಪಿಸುವುದು,
ವಿಶೇಷ ಚೇತನರಲ್ಲಿ ಆತ್ಮವಿಶ್ವಾಸ ಬೆಳೆಸುವುದು ಹಾಗೂ ಸಮಾಜದ ಇತರೆ ವ್ಯಕ್ತಿಗಳಂತೆ ಸಮಾನವಾದ ಅವಕಾಶಗಳನ್ನು ಒದಗಿಸುವುದು ಮತ್ತು ಅವರಿಗೆ ಯೋಗ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು.
ಪ್ರತಿ ವರ್ಷದಂತೆ, 2025-26ನೇ ಸಾಲಿನಲ್ಲಿಯೂ ಡಿಸೆಂಬರ್-03 ರಂದು ಶಾಲಾ, ಕ್ಲಸ್ಟರ್, ಬ್ಲಾಕ್ ಹಾಗೂ ಜಿಲ್ಲಾ ಹಂತದಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುವುದು.

ಶಾಲಾ ಹಂತದಲ್ಲಿ ಹಮ್ಮಿಕೊಳ್ಳಬೇಕಾಗಿರುವ ಚಟುವಟಿಕೆಗಳು

ಎಲ್ಲಾ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಕಡ್ಡಾಯವಾಗಿ ಮಾಡಿಕೊಳ್ಳುವುದು. ವಿಶೇಷ ಅಗತ್ಯವುಳ್ಳ ಮಕ್ಕಳನ್ನು(CwSN) Screening ಮಾಡಿ PRASHAST 2.0 App ನಲ್ಲಿ ನಮೂದಿಸುವುದು.ಪೂರ್ವಭಾವಿಯಾಗಿ ಚಟುವಟಿಕೆ/ಕಾರ್ಯಕ್ರಮಗಳನ್ನು ಯೋಜಿಸಿ, ಅಗತ್ಯ ಸಿದ್ಧತೆಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸುವುದು.
ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿವಿಧ ರೀತಿಯ ನ್ಯೂನತೆಗಳ ಬಗ್ಗೆ ಮಾಹಿತಿ ನೀಡುವುದು ಹಾಗೂ ಸರ್ಕಾರದ ವತಿಯಿಂದ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ(CWSN) ನೀಡಲಾಗುವ ಸೌಲಭ್ಯ ಹಾಗೂ ಭತ್ಯೆಗಳ ಕುರಿತು ಅರಿವು ಮೂಡಿಸುವುದು.

ವಿದ್ಯಾರ್ಥಿಗಳಿಗೆ ಕಲಿಕಾ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ನೀಡಬೇಕಾದ ಸಹಕಾರದ ಕುರಿತು ಅರಿವು ಮೂಡಿಸುವುದು, ಈ ಕುರಿತು ಮುಕ್ತ ಚರ್ಚೆಗೆ ಅವಕಾಶ ಒದಗಿಸುವುದು.ಶಾಲಾ ಹಂತದಲ್ಲಿ ವಿಶೇಷ ಚೇತನ ಮಕ್ಕಳಿಗಾಗಿ ಅವರ ಪ್ರತಿಭೆ ಅನಾವರಣಕ್ಕಾಗಿ ಸೂಕ್ತ ವೇದಿಕೆ ಒದಗಿಸಿ, ಅವರಿಗೆ ಅವಕಾಶ ನೀಡುವುದು. ಉದಾ: ಅವರಲ್ಲಿನ ಕಲೆ, ಸೃಜನಶೀಲತೆ, ನಾವಿನತೆ, ಕ್ರೀಡೆ, ಸಾಹಿತ್ಯಕ, ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸುವುದು, ಇದಕ್ಕೆ ಸ್ಥಳೀಯ ಸಂಸ್ಥೆಗಳ ದಾನಿಗಳ ಸಹಕಾರ ಪಡೆಯುವುದು.ವಿಶೇಷ ಚೇತನರಿಗೆ ಸಮಾನ ಅವಕಾಶ ನೀಡುವ ಕುರಿತು ಎಲ್ಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಎಂದು ಸೂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read