ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, 15 ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಬೋಳಾರೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತ ಬಾಲಕಿಯನ್ನ ಕವನ (15) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನ ಬಹಿರ್ದೆಸೆಗೆ ಹೋಗಿದ್ದ ಬಾಲಕಿ ಸಂಜೆಯಾದರೂ ವಾಪಸ್ ಬಂದಿರಲಿಲ್ಲ.
ನಂತರ ಹುಡುಕಾಡಿದಾಗ ಶವಪತ್ತೆಯಾಗಿದೆ.ತಾಯಿ ಇಲ್ಲದ ಬಾಲಕಿ ಕವನ ಸಾವಿತ್ರಮ್ಮ ಎಂಬುವವರ ಜೊತೆ ವಾಸವಾಗಿದ್ದಳು.ಕವನ ತಂದೆ ಬೇರೆ ಕಡೆ ವಾಸವಾಗಿದ್ದರು. ಬಾಲಕಿ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
