ಹಾವೇರಿ : ಹಾವೇರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.
ಹಾವೇರಿ ಜಿಲ್ಲೆ ರಟ್ಟೇಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ಚಿರತೆ ಓಡಾಡುತ್ತಿರುವುದನ್ನು ಸ್ಥಳೀಯರು ನೋಡಿದ್ದಾರೆ. ಗ್ರಾಮದ ರೈತರೊಬ್ಬರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿಯಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ.
ರೈತರ ಶಂಕರಗೌಡರ ತೋಟದ ಮನೆ ಮುಂದೆ ಚಿರತೆ ಕಾಣಿಸಿಕೊಂಡಿದ್ದು, ರೈತರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಚಿರತೆಯನ್ನು ಕೂಡಲೇ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
