ಬೆಂಗಳೂರು: ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಬಳಿ ತಡರಾತ್ರಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಟೆಕ್ಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ.
35 ವರ್ಷದ ಆನಂದ್ ಮೃತ ಟೆಕ್ಕಿ. ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಐಟಿ ಉದ್ಯೋಗಿಯಾಗಿದ್ದ ಆನಂದ್ ತಡರತರಿ ಅಪಘಾತಕ್ಕಿಡಾಗಿ ರಸ್ತೆಯಲ್ಲಿ ಬಿದ್ದಿದ್ದರು. ಆಂಬುಲೆನ್ಸ್ ಮೂಲಕ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ರೈಲ್ವೆ ಕೆಳಸೇತುವೆಯಲ್ಲಿ ಆಂಬುಲೆನ್ಸ್ ಪಾಸಾಗದೇ ಪರದಾಟ ನಡೆಸಿತ್ತು. ಈ ವೇಳೆ ಗಾಯಾಳುವನ್ನು ಕಾರಿಗೆ ಶಿಫ್ಟ್ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲಾಗಲೇ ಗಾಯಾಳು ಸ್ಥಿತಿ ಗಂಭೀರವಾಗಿತ್ತು.
ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಟೆಕ್ಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
