ಹಾಸನ: ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಆಟೋ ಚಾಲಕನನ್ನು ಬೇಲೂರು ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಆಟೋ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಹಿಂದೆ ಬಿದ್ದಿದ್ದ. ತನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಆಕೆ ಪ್ರೀತಿಸಲು ನಿರಾಕರಿಸಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ, ರಸ್ತೆಯಲ್ಲಿ ಅಡ್ಡಗಟ್ಟಿ ಮೈಕೈ ಮುಟ್ಟಿ ಎಳೆದಾಡಿ ಹಿಂಸಿಸುತ್ತಿದ್ದ.
ಆಟೋ ಚಾಲಕನ ಕಿರುಕುಳಕ್ಕೆ ಬೇಸತ್ತ ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದಳು. ಪೋಷಕರು ಆಟೋಚಾಲಕನ ವಿರುದ್ಧ ದೂರು ನೀಡಿದ್ದು. ಸದ್ಯ ಆರೋಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮನುಬ್ (27) ಎಂದು ಗುರುತಿಸಲಾಗಿದೆ. ಆಟೋ ಚಾಲಕನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.
