ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿದ್ದ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಂದು ದೆಹಲಿಗೆ ವಾಪಾಸ್ ಆಗುತ್ತಿರುವ ಖರ್ಗೆ ಅಧಿಕಾರ ಹಂಚಿಕೆ ಕುರಿತು ಕೆಲ ಅಪ್ ಡೇಟ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ನಾಲ್ಕು ಮಂದಿ ಪ್ರಮುಖ ನಾಯಕರನ್ನು ದೆಹಲಿಗೆ ಕರೆಸಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಸಿಎಂ, ಡಿಸಿಎಂ ಸೇರಿ ನಾಲ್ಕು ನಾಯಕರನ್ನು ಕರೆಸಿ ಎಲ್ಲರೂ ಒಟ್ಟಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಕಾಂಗ್ರೆಸ್ ಹೈಕಮಾಂಡ್ ಏಕಾಂಗಿಲ್ಲ. ಅದೊಂದು ತಂಡ. ಹೈಕಮಾಂಡ್ ಒಟ್ಟಿಗೆ ಕುಳಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಮುಂದೆ ಏನು ಮಾಡಬೇಕೆಂದು ತೀರ್ಮಾನಿಸುತ್ತೇವೆ ಎಂದರು.
