ಗಮನಿಸಿ : ರಾಜ್ಯ ಸರ್ಕಾರದಿಂದ ಅರ್ಚಕರ ಮಕ್ಕಳಿಗೆ ಸಿಗಲಿದೆ 1 ಲಕ್ಷದವರೆಗೆ ಪ್ರೋತ್ಸಾಹಧನ , ಡಿ.31 ರೊಳಗೆ ಅರ್ಜಿ ಸಲ್ಲಿಸಿ.!

ಬೆಂಗಳೂರು :  ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು, ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 2024-25 ಸಾಲಿಗೆ ಪ್ರೋತ್ಸಾಹಧನ ನೀಡಲು ಮುಂದಾಗಿದೆ. ಈ ಮೂಲಕ ಧಾರ್ಮಿಕ ಸೇವೆಯಲ್ಲಿರುವವರ ಕುಟುಂಬಕ್ಕೆ ಶಕ್ತಿ ತುಂಬುವ, ಅವರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಬೆನ್ನೆಲುಬಾಗುವ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಪಿಯುಸಿ, ಐಟಿಐ / ಜೆ.ಒ.ಸಿ/ಡಿಪ್ಲೋಮಾ ಓದುವವರಿಗೆ ರೂ . 5,000/-

ಪದವಿ ಶಿಕ್ಷಣ ಪಡೆಯುತ್ತಿರುವವರಿಗೆ ರೂ. 7,000/-

ಸ್ನಾತಕೋತ್ತರ ಪದವಿ ಪಡೆಯುತ್ತಿರುವವರಿಗೆ ರೂ. 15,000/- ಭತ್ಯೆ ನೀಡಲಾಗುತ್ತದೆ.

ಇದೇ ರೀತಿಯಾಗಿ, ಆಯುರ್ವೇದಿಕ್, ಹೋಮಿಯೋಪತಿ ಮತ್ತು ಯುನಾನಿಯಂತಹ ಇತರೆ ವೈದ್ಯಕೀಯ ಕೋರ್ಸ್‌ಗಳಿಗೆ ಹಾಗೂ ತಾಂತ್ರಿಕ ಶಿಕ್ಷಣ (ಇಂಜಿನಿಯರಿಂಗ್) ಓದುತ್ತಿರುವವರಿಗೆ ರೂ. 25,000/- ಸಹಾಯಧನ ದೊರೆಯಲಿದೆ.ಹಾಗೆಯೇ, ವೈದ್ಯಕೀಯ/ ಡೆಂಟಲ್ ಶಿಕ್ಷಣ ಓದುವವರಿಗೆ 50,000/- ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ 1,00,000/- ರೂ ಮೊತ್ತದ ಪ್ರೋತ್ಸಾಹ ಧನ ಕೊಡಲಾಗುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.

ಅರ್ಹರು ಧಾರ್ಮಿಕ ದತ್ತಿ ಆಯುಕ್ತರ ಕಚೇರಿ/ಸಂಬಂಧಪಟ್ಟ ಜಿಲ್ಲಾಧಿಕಾರಿ ಅಥವಾ ತಾಲೂಕು ತಹಶಿಲ್ದಾರ್ ಕಚೇರಿಯಲ್ಲಿ ಅರ್ಜಿ ನಮೂನೆಗಳನ್ನು ಪಡೆದು ದೃಢೀಕೃತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಧಾರ್ಮಿಕ ದತ್ತಿ ಇಲಾಖೆಯ ವೆಬ್ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆಯಿರಿ.

ನಾಡಿನ ಅರ್ಚಕರು, ನೌಕರರ ಮಕ್ಕಳು, ಯುವಜನರು ಈ ಯೋಜನೆಯ ಸೌಲಭ್ಯವನ್ನು ಸದುಪಯೋಗ ಮಾಡಿಕೊಂಡು ಉನ್ನತ ಶಿಕ್ಷಣ ಪಡೆದು ಶೈಕ್ಷಣಿಕ ಪ್ರಗತಿ ಸಾಧಿಸಿ ತಮ್ಮ ಕುಟುಂಬಕ್ಕೆ ಮತ್ತು ಸಮಾಜಕ್ಕೆ ಕೀರ್ತಿ ತರುವಂತೆ ಆಶಿಸುತ್ತೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read