ಹೊಸಕೋಟೆ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತಸಂಭವಿಸಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸ್ದೆ. ಅಪಘಾತದ ರಭಸಕ್ಕೆ ಎರಡೂ ವಾಹನಗಳು ನುಜ್ಜುಗುಜ್ಜಾಗಿವೆ. ಅತಿವೇಗ ಹಾಗೂ ನಿರ್ಲಕ್ಷವೇ ಘಟನೆಗೆ ಕಾರಣ ಎನ್ನಲಾಗಿದೆ.
ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡಿದ ಘಟನೆಯೂ ನಡೆದಿದೆ.
