ಮೈಸೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ಸಿಎಂ ಬದಲಾಯಿಸುವ ಪರಿಸ್ಥಿತಿ ಸದ್ಯಕ್ಕಿಲ್ಲ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮಯ್ಯನವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಅವರ ವಿರುದ್ಧ ಯಾವುದೇ ದೂರುಗಳು ಇಲ್ಲ. ಆದರೂ ಕೆಲವರು ಬೇರೆಯವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕೇಳಿದ್ದಾರೆ ಅದರ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.
ನಮ್ಮ ಪಕ್ಷದಲ್ಲಿ ಯಾರು ಸಿಎಂ ಆಗಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಬೇರೆಯವರ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಲ್ಲ ಎಂದು ಹೇಳಿದರು.
