BREAKING: ಕಲ್ಯಾಣ ಕರ್ನಾಟಕದಲ್ಲಿ  ಚೆಕ್ ಡ್ಯಾಂ, ಕೆರೆ ಅಭಿವೃದ್ಧಿಗೆ 200 ಕೋಟಿ ರೂ.: ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಂತಿವೆ.

ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ ಡ್ಯಾಂ, ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ರೂ.200 ಕೋಟಿಗಳ ಅಂದಾಜು ಮೊತ್ತದಲ್ಲಿ ಜಾರಿಗೆ ಆಡಳಿತಾತ್ಮಕ ಅನುಮೋದನೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ – ಭಟ್ಕಳ ವಿಧಾನಸಭಾ ಕ್ಷೇತ್ರದ ಮುಕ್ಕೋಡು ಗ್ರಾಮದ ಸಮೀಪ ಶರಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ ರೂ.200 ಕೋಟಿ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಘನತ್ಯಾಜ್ಯ ಸಮರ್ಪಕ 2 (OPERATION AND MAINTENANCE OF LANDFILL SITES) ಪ್ಯಾಕೇಜಿನ ಕಾಮಗಾರಿಗಳನ್ನು ರೂ.100 ಕೋಟಿ ಅಂದಾಜು ಮೊತ್ತದಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಮೂಲಕ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.

ತುಮಕೂರು ವಿಶ್ವವಿದ್ಯಾಲಯದಲ್ಲಿ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷ ಅಭಿಯಾನ ಯೋಜನೆಯಡಿ ಕಟ್ಟಡ ನಿರ್ಮಾಣ, ಉಪಕರಣ ಖರೀದಿ ಸೇರಿದಂತೆ ರೂ.20 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಅನುಷ್ಠಾನಕ್ಕೆ ನಿರ್ಧಾರ.

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಹೊರವಲಯದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ನೂತನ ಸ್ಯಾಟಲೈಟ್ ಬಸ್ ನಿಲ್ದಾಣದ ಕಾಮಗಾರಿಯನ್ನು ರೂ.17.50 ಕೋಟಿ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.

ಕಬಿನಿ ಎಡದಂಡೆ ಕಾಲುವೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ರೂ.50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ನಿರ್ಧಾರ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read