ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ…
”ಔಷಧಗಳು ಮತ್ತು ಸೌಂದರ್ಯ ವರ್ದಕಗಳು (ಕರ್ನಾಟಕ ತಿದ್ದುಪಡಿ), 2025”ಕ್ಕೆ ಅನುಮೋದನೆ
ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ (ತಿದ್ದುಪಡಿ) ವಿದೇಯಕ, 2025ಕ್ಕೆ ಅನುಮೋದನೆ
ಕರ್ನಾಟಕ ರಾಜ್ಯ ಹಜ್ ಸಮಿತಿ ನಿಯಮಾವಳಿ, 2025 ಅನ್ನು ಜಾರಿಗೆ ತರಲು ನಿರ್ಧಾರ
ಕರ್ನಾಟಕ ಕಿರು ಬಂದರುಗಳಲ್ಲಿ ಕಬ್ಬಿಣದ ಅದಿರು ನಿರ್ವಹಣಾ ನೀತಿ, 2025 ಅನ್ನು ಜಾರಿಗೆ ತರಲು ಅನುಮೋದನೆ
ಕರ್ನಾಟಕ ನ್ಯಾಯಾಂಗ ಸೇವೆ (ನೇಮಕಾತಿ) (ತಿದ್ದುಪಡಿ) ನಿಯಮಗಳು, 2025ಕ್ಕೆ ಅನುಮೋದನೆ
ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2025 ವನ್ನು ವಿಧಾನ ಮಂಡಲದ ಉಭಯ ಸದನಗಳ ಮುಂದೆ ಮಂಡಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಂದಿನ ವಿಧಾನ ಮಂಡಲದ ಅಧಿವೇಶನದಲ್ಲಿ ಉಭಯ ಸದನಗಳ ಮುಂದೆ ಮಂಡಿಸಲು ಅನುಮೋದನೆಗೊಂಡ ವಿಧೇಯಕಗಳು ಹಾಗೂ ಜಾರಿಯಾಗಲಿರುವ ಹೊಸ ನಿಯಮಗಳ ಮಾಹಿತಿ #CabinetDecisions pic.twitter.com/7Mm6QWGxCR
— Siddaramaiah (@siddaramaiah) November 27, 2025
