HomeLatest Newsಸಣ್ಣ, ಅತೀ ಸಣ್ಣ ರೈತರಿಗೆ ಗುಡ್ ನ್ಯೂಸ್: ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯಲು...

ಸಣ್ಣ, ಅತೀ ಸಣ್ಣ ರೈತರಿಗೆ ಗುಡ್ ನ್ಯೂಸ್: ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ

ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

 ಸಣ್ಣ, ಅತೀ ಸಣ್ಣ, ಪರಿಶಿಷ್ಟ ಜಾತಿ, ಹಾಗೂ ಪರಿಶಿಷ್ಟ ಪಂಗಡದ ಅರ್ಹ ರೈತರು ಅರ್ಜಿ ಸಲ್ಲಿಸಬಹುದು. ಈ ಯೋಜನೆಯಡಿಯಲ್ಲಿ ತೋಟಗಾರಿಕೆ ಬೆಳೆಗಳಾದ ವೀಳ್ಯದೆಲೆ, ತೆಂಗು, ಮಾವು, ಸಪೋಟ, ಸೀಬೆ, ಅಂಗಾಂಶ ಬಾಳೆ, ಪಪ್ಪಾಯ, ಕರಿಬೇವು, ಕಾಳುಮೆಣಸು, ಕೋಕೋ, ನೇರಳೆ, ಸೀತಾಫಲ, ಡ್ರಾಗನ್ ಪ್ರೋಟ್ಸ್, ಮಲ್ಲಿಗೆ, ಬೆಣ್ಣೆ, ಹಣ್ಣು, ಹಲಸು, ಗುಲಾಬಿ ಇತ್ಯಾದಿ ತೋಟಗಾರಿಕೆ ಬೆಳೆಗಳಿಗೆ ಅರ್ಜಿ ಸಲ್ಲಿಬಹುದು.

ಅರ್ಜಿ ಸಲ್ಲಿಸಲು ಡಿಸೆಂಬರ್ 30 ರೊಳಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ) ಹರಿಹರ ಕಛೇರಿಗೆ ಅಥವಾ ಆಯಾ ಗ್ರಾಮ ಪಂಚಾಯತಿಗೆ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ದಾವಣಗೆರೆ ಜಿ.ಪಂ) ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular