ಮಹಾಂತೇಶ್ ಬೀಳಗಿ ಕುಟುಂಬ ಸದಸ್ಯರಿಗೆ ಕ್ಲಾಸ್ 1 ಅಧಿಕಾರಿ ಹುದ್ದೆ ನೀಡಲು ವಿಜಯೇಂದ್ರ ಮನವಿ

ಬೆಂಗಳೂರು: ಅಪಘಾತದಲ್ಲಿ ನಿಧನರಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕುಟುಂಬ ಸದಸ್ಯರಿಗೆ ಕ್ಲಾಸ್ 1 ಅಧಿಕಾರಿ ಹುದ್ದೆ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮನವಿ ಮಾಡಿದ್ದಾರೆ.

ಹಿರಿಯ IAS ಅಧಿಕಾರಿ ದಿ. ಮಹಾಂತೇಶ್ ಬೀಳಗಿಯವರ ಅಕಾಲಿಕ ನಿಧನದಿಂದ ನೊಂದಿರುವ ಕುಟುಂಬದ ಕಣ್ಣೀರು ಒರೆಸಿ, ಸಾಂತ್ವನ ಹೇಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಈ ಹಿಂದೆ ಇಂತಹ ಸಂದರ್ಭಗಳಲ್ಲಿ ಅಗಲಿದ ಅಧಿಕಾರಿಗಳ ಕುಟುಂಬ ವರ್ಗದವರಿಗೆ ಅಧಿಕಾರಿ ಹುದ್ದೆಯನ್ನು ನೀಡಿದ ಹಲವು ನಿದರ್ಶನಗಳಿದ್ದು, ಅದಕ್ಕೆ ಅನುಗುಣವಾಗಿ ಬೀಳಗಿಯವರ ಕುಟುಂಬದ ಸದಸ್ಯರೊಬ್ಬರಿಗೆ ಕ್ಲಾಸ್-1 ಅಧಿಕಾರಿ ಹುದ್ದೆ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಮಹಾಂತೇಶ್ ಬೀಳಗಿಯವರ ಆದರ್ಶಪ್ರಾಯ ಕಾರ್ಯನಿರ್ವಹಣೆ, ಸೇವೆಗಳ ಹಿನ್ನಲೆಯಲ್ಲಿ, ಇದನ್ನು ವಿಶೇಷ ಪ್ರಕರಣವೆಂದು ರಾಜ್ಯ ಸರ್ಕಾರ ಪರಿಗಣಿಸಬೇಕು. ರಾಜ್ಯ ಸರ್ಕಾರ ಶೀಘ್ರದಲ್ಲಿ ಪೂರಕವಾಗಿ ಮಾನವೀಯ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಹೇಳಿದ್ದಾರೆ.

ಕರ್ನಾಟಕ ಸರ್ಕಾರದ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನ ಹೊಂದಿರುವುದು ತಮಗೆ ಗೊತ್ತಿರುವ ವಿಚಾರ. ಒಬ್ಬ ಸರ್ಕಾರಿ ಅಧಿಕಾರಿಯಾಗಿ ಕೇವಲ ಸರಕಾರಿ ಕೆಲಸ ಎಂದು ಪರಿಗಣಿಸದೆ ಬಡವರ ಅಶಕ್ತರ ಅಭಿವೃದ್ಧಿಗಾಗಿ ಅಂತಕರಣದಿಂದ ಕೆಲಸ ಮಾಡಿದ ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟು ಜನಸೇವೆಗೈದ ಮಹಾಂತೇಶ್ ಬೀಳಗಿಯವರು ಒಬ್ಬ ಆದರ್ಶ ಅಧಿಕಾರಿಯಾಗಿದ್ದರು. ಅವರ ಆಕಾಲಿಕ ನಿಧನವು ಕೇವಲ ಅವರ ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಸಮಾಜಕ್ಕೆ ನಷ್ಟವನ್ನುಂಟು ಮಾಡಿದೆ.

ಈ ಹಿಂದೆ ಅಧಿಕಾರಿಗಳು ಆಕಾಲಿಕವಾಗಿ ಮರಣ ಹೊಂದಿದ ಸಂದರ್ಭದಲ್ಲಿ ಅವರ ಕುಟುಂಬ ವರ್ಗದವರಿಗೆ ಕ್ಲಾಸ್-1 ಅಧಿಕಾರಿ ಹುದ್ದೆಯನ್ನು ನೀಡಿದ ಹಲವು ನಿದರ್ಶನಗಳಿವೆ. ಅದರಂತೆ ಮಹಾಂತೇಶ್ ಬೀಳಗಿ ಅವರ ಅಕಾಲಿಕ ನಿಧನವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ, ಅವರ ಪತ್ನಿ ಅಥವಾ ಪುತ್ರಿಗೆ ಅನುಕಂಪದ ಆಧಾರದ ಮೇಲೆ ಕ್ಲಾಸ್-1 ಅಧಿಕಾರಿ ಹುದ್ದೆಯನ್ನು ನೀಡುವಂತೆ ವಿಜಯೇಂದ್ರ ಪತ್ರದಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read