BIG NEWS : ಉಡುಪಿ ಶ್ರೀ ಕೃಷ್ಣ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ : ರೋಡ್ ಶೋ, ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿ.!

ಉಡುಪಿ : ನವೆಂಬರ್ 28ರಂದು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ‘ಲಕ್ಷ ಕಂಠ ಗೀತಾ’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ನವೆಂಬರ್ 28ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಉಡುಪಿ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ.

1 ತಿಂಗಳ ಕಾಲ ಉಡುಪಿ ಕೃಷ್ಣಮಠದಲ್ಲಿ ಬೃಹತ್ ಗೀತೋತ್ಸವ ನಡೆಯಲಿದ್ದು, ನ.28 ರಂದು ಬರೋಬ್ಬರಿ 1 ಲಕ್ಷ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ. ಅಂದರೆ 1 ಲಕ್ಷ ಭಕ್ತರ ಜೊತೆ ಶ್ಲೋಕ ಪಠಣ ಮಾಡಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದು, ಮೋದಿ ಕೊನೆಯ 10 ಶ್ಲೋಕ ಪಠಿಸಲಿದ್ದಾರೆ.
ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ನಂತರ ಪ್ರಧಾನಿ ಮೋದಿಯವರು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಗೀತಾ ಜಯಂತಿ ಹಿನ್ನೆಲೆಯಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಬೃಹತ್ ಗೀತೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಉಡುಪಿ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಶುಕ್ರವಾರ ನಡೆಯುವ ಲಕ್ಷ ಕಂಠ ಗೀತ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಉಡುಪಿ ಭೇಟಿ ಬಗ್ಗೆ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದ್ದಾರೆ.

ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಭಕ್ತರಿಗೆ ಕೃಷ್ಣಮಠ ಮತ್ತು ರಥ ಬೀದಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹೊರ ಜಿಲ್ಲೆಗಳಿಂದಲೂ ಹೆಚ್ಚಿನ ಪೊಲೀಸರನ್ನು ಕರೆಸಲಾಗಿದ್ದು, ಎಲ್ಲೆಡೆ ಭದ್ರತೆ ಕೈಗೊಳ್ಳಲಾಗಿದೆ. ಪ್ರಧಾನಿಯವರ ಸ್ವಾಗತಕ್ಕೆ ಕಟೌಟ್ ಗಳು, ಫ್ಲೆಕ್ಸ್ ಗಳನ್ನು ಅಳವಡಿಸಲಾಗಿದ್ದು, ಉಡುಪಿ ನಗರ ಕೇಸರಿಮಯವಾಗಿದೆ. ಪ್ರಧಾನಿ ಮೋದಿ ಅವರು ಶ್ರೀ ಕೃಷ್ಣನ ದರ್ಶನ ಪಡೆದು ಲಕ್ಷ ಕಂಠ ಗೀತ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read