ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಜೋರಾಗಿದೆ. ಅಧಿಕಾರ ಹಂಚಿಕೆ ವಿಚಾರ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಲ್ಲಿತುವಾಗಲೇ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಗಳಲ್ಲಿ ಕಾಂಗ್ರೆಸ್ ನಾಯಕರು ಪ್ರತ್ಯೇಕ ಸಭೆಗಳನ್ನು ನಡೆಸಿದ್ದಾರೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ನಾಗಾಸಾಧುಗಳು ಆಗಮಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಗುಜರಾತ್ ನಿಂದ ನಾಲ್ವರು ನಾಗಾಸಾಧುಗಳು ಆಗಮಿಸಿದ್ದಾರೆ. ಎರಡು ದಿನಗಳ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಉತ್ತರ ಪ್ರದೇಶದಿಂದ ಇಬ್ಬರು ನಾಗಾಸಾಧುಗಳು ಆಗಮಿಸಿ, ಶೀಘ್ರವೇ ಮುಖ್ಯಮಂತ್ರಿಯಾಗಲಿ ಎಂದು ಆಶಿರ್ವಾದ ಮಾಡಿದ್ದರು. ಇದೀಗ ಇಂದು ಗುಜರಾತ್ ನಿಂದ ನಾಲ್ವರು ನಾಗಾಸಾಧುಗಳ ಮತ್ತೊಂದು ತಂಡ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದೆ.
ಮತ್ತೊಂದೆಡೆ ಡಿ.ಕೆ.ಶಿವಕುಮಾರ್ ಅಭಿಮಾನಿಗಳು, ಬೆಂಬಲಿಗರು ಮೈಸುರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ತಾಯಿ ಪಲ್ಲಕ್ಕಿ ಉತ್ಸವ ನಡೆಸಿ ಡಿ.ಕೆ.ಶಿವಕುಮಾರ್ ಸಿಎಂ ಆಗಮಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.
