ಮಂಗಳೂರು : ಕೃಷ್ಣನೂರು ಉಡುಪಿಗೆ ಪ್ರಧಾನಿ ಮೋದಿ ಆಗಮಿಸಿದ್ದು, ಭರ್ಜರಿ ರೋಡ್ ಶೋ ನಡೆಸಿದ್ದಾರೆ.ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದು, ಬಳಿಕ ಅಲ್ಲಿಂದ ನೇರವಾಗಿ ಸೇನಾ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಬಂದಿಳಿದಿದ್ದಾರೆ. ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಮತ್ತಿತರರು ಸ್ವಾಗತ ಕೋರಿದರು.ಪ್ರಧಾನಿ ಮೋದಿಗೆ ಹುಲಿ ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಸ್ವಾಗತ ಕೋರಿದೆ.
ನಂತರ ತೆರೆದ ವಾಹನದಲ್ಲಿ ಪ್ರಧಾನಿ ಮೋದಿ ರೋಡ್ ಶೋ ಮೂಲಕ ಕೃಷ್ಣಮಠಕ್ಕೆ ಆಗಮಿಸುತ್ತಿದ್ದಾರೆ. ಜನರು ಹೂ ಮಳೆಗಳ ಮೂಲಕ ಭರ್ಜರಿ ಸ್ವಾಗತ ಕೋರಿದ್ದಾರೆ.
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ‘ಲಕ್ಷ ಕಂಠ ಗೀತಾ’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
1 ತಿಂಗಳ ಕಾಲ ಉಡುಪಿ ಕೃಷ್ಣಮಠದಲ್ಲಿ ಬೃಹತ್ ಗೀತೋತ್ಸವ ನಡೆಯಲಿದ್ದು, ಬರೋಬ್ಬರಿ 1 ಲಕ್ಷ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ. ಅಂದರೆ 1 ಲಕ್ಷ ಭಕ್ತರ ಜೊತೆ ಶ್ಲೋಕ ಪಠಣ ಮಾಡಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದು, ಮೋದಿ ಕೊನೆಯ 10 ಶ್ಲೋಕ ಪಠಿಸಲಿದ್ದಾರೆ.
ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ನಂತರ ಪ್ರಧಾನಿ ಮೋದಿಯವರು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಗೀತಾ ಜಯಂತಿ ಹಿನ್ನೆಲೆಯಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಬೃಹತ್ ಗೀತೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.
#WATCH | Udupi, Karnataka | PM Narendra Modi holds a roadshow in Udupi
— ANI (@ANI) November 28, 2025
Source: ANI/ DD pic.twitter.com/QOyJiHWidC
