ತಿರುವನಂತಪುರಂ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಕೇರಳದ ಕಾಂಗ್ರೆಸ್ ಶಾಸಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಪಾಲಕ್ಕಾಡ್ ಶಾಸಕ ರಾಹುಲ್ ಮಮ್ ಕೂತಥಿಲ್ ವಿರುದ್ಧ ಕೇಸ್ ದಾಖಲಾಗಿದೆ. ಸಂತ್ರಸ್ತ ಮಹಿಳೆಯ ದೂರಿನ ಮೇರೆಗೆ ವಲಿಯಮಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಎಂ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿದ್ದ ದೂರುದಾರೆ ರಾಹುಲ್ ಮಮ್ ಕೂತಥಿಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಬಲವಂತದ ಗರ್ಭಪಾತ ಹಾಗೂ ಜೀವ ಬೆದರಿಕೆ ಸಂಬಂಧಿತ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
