BREAKING : ಉಡುಪಿಯ ಕೃಷ್ಣಮಠದಲ್ಲಿ ಕನಕನ ಕಿಂಡಿಗೆ ‘ಚಿನ್ನದ ಹೊದಿಕೆ’ ಸಮರ್ಪಿಸಿದ ಪ್ರಧಾನಿ ಮೋದಿ |WATCH VIDEO

ಉಡುಪಿ : ಪರ್ಯಾಯ ಪುತ್ತಿಗೆ ಮಠ ಮತ್ತು ಶ್ರೀಕೃಷ್ಣಮಠಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಿದ್ದು, ಕೃಷ್ಣನೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.

ಇದಾದ ಬಳಿಕ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿ ಶ್ರೀ ಕೃಷ್ಣನ ದರ್ಶನ ಪಡೆದಿದ್ದಾರೆ. ನಂತರ ಸ್ವರ್ಣ ಲೇಪಿತ ಕನಕನ ಕಿಂಡಿ ಲೋಕಾರ್ಪಣೆಗೊಳಿಸಿದ್ದಾರೆ. ಬರೋಬ್ಬರಿ 2 ಕೋಟಿ ರೂ ವೆಚ್ಚದಲ್ಲಿ ಸ್ವರ್ಣ ಲೇಪಿತ ಕನಕನ ಕಿಂಡಿಯನ್ನ ನಿರ್ಮಿಸಲಾಗಿದೆ.ಉಡುಪಿಯ ಕೃಷ್ಣ ಮಂಟಪದಲ್ಲಿ ಕನಕನ ಕಿಂಡಿಗೆ ಚಿನ್ನದ ಹೊದಿಕೆ ಸಮರ್ಪಿಸಿ ಸುವರ್ಣ ತೀರ್ಥ ಮಂಟಪ ಉದ್ಘಾಟಿಸಿದ್ದಾರೆ.

ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸಚಿವ ದಿನೇಶ್ ಗುಂಡೂರಾವ್ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಆದಿ ಉಡುಪಿಯಿಂದ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಿದ್ದು, ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ರೋಡ್ ಶೋ ನಡೆದಿದೆ. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿರುವ ಜನರು ಮೋದಿ ಮೋದಿ ಎಂದು ಜಯಘೋಷಗಳನ್ನು ಕೂಗಿ ಪ್ರಧಾನಿ ಮೇಲೆ ಹೂಮಳೆಗರೆದು ಸ್ವಾಗತಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read