BIG NEWS : ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದಂತೆ ರಾಜ್ಯ ಸರ್ಕಾರ ಮಾಡಿದ ಮನವಿ ಏನು ಗೊತ್ತೇ.?

ಬೆಂಗಳೂರು : ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದಂತೆ ರಾಜ್ಯ ಸರ್ಕಾರ ಮೋದಿಗೆ ಒಂದು ಮನವಿ ಮಾಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ರಾಜ್ಯದ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರವು ತಕ್ಷಣ ಮಧ್ಯಪ್ರವೇಶ ಮಾಡಿ ಕನಿಷ್ಠ ಬೆಂಬಲ ಬೆಲೆ, ಎಥೆನಾಲ್ ಹಂಚಿಕೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಿ, ರೈತರಿಗೆ ದೊರೆಕಬೇಕಾದ ನ್ಯಾಯಯುತ ಬೆಲೆ ಸಿಗುವಂತೆ ಮಾಡಬೇಕೆಂದು ಪ್ರಧಾನಿ Narendra Modi ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದೆ.

ಇಂದು ಪ್ರಧಾನಿಗಳು ಉಡುಪಿಗೆ ಭೇಟಿನೀಡಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ Dinesh Gundu Rao ಅವರು ಮೋದಿಯವರನ್ನು ರಾಜ್ಯಕ್ಕೆ ಬರಮಾಡಿಕೊಂಡು, ನಮ್ಮ ಮನವಿ ಪತ್ರವನ್ನು ಅವರಿಗೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ತಕ್ಷಣ ರಾಜ್ಯದ ರೈತರ ಕಷ್ಟವನ್ನು ಅರ್ಥೈಸಿಕೊಂಡು, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದು ಭಾವಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read