ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಪೈಪೋಟಿ ತಾರಕಕ್ಕೇರಿದೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ದೆಹಲಿಗೆ ಹೋಗುತ್ತೇನೆ. ದೆಹಲಿ ನಮಗೆ ದೇವಸ್ಥಾನವಿದ್ದಂತೆ ಹೈಕಮಾಂಡ್ ಕರೆದಾಗ ದೆಹಲಿಗೆ ಹೋಗಿಯೇ ಹೋಗುತ್ತೇನೆ ಎಂದರು.
ನಮ್ಮ ವರಿಷ್ಠರು ಕರೆದಾಗ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಇಬ್ಬರು ನಾಯಕರು ದೆಹಲಿಗೆ ಹೋಗುತ್ತೇವೆ. ಹೈಕಮಾಂಡ್ ನಾಯಕರು ಹೇಳಿದಂತೆ ನಡೆಯುತ್ತೇವೆ ಎಂದು ಹೇಳಿದರು.
