ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿಗಾಗಿ ಕಿತ್ತಾಟ ತಾರಕಕ್ಕೇರಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಾಳೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ.
ನಾಳೆ ಬೆಳಿಗ್ಗೆ 9:30ಕ್ಕೆ ಸಿಎಂ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಹೈಕಮಾಂಡ್ ನಾಯಕರ ಸೂಚನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಲಿದ್ದು, ಸದ್ಯದ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
